ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಶಾಲೆಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ ಎಂದು ತಿಳಿದು ಬಂದಿದೆ. ವರ್ತೂರು ಸಮೀಪದ ಕ್ರಿಸ್ ಲಿಸ್ ಹೈ ಸ್ಕೂಲ್ ಗೆ ಈಮೇಲ್ ಮೂಲಕ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ.
ಬೆಳಗ್ಗೆ 7.45ಕ್ಕೆ ಆಡಳಿತ ಮಂಡಳಿ ಶಾಲೆಗೆ ಬಂದು ಈಮೇಲ್ ಪರಿಶೀಲನೆ ನಡೆಸಿದ ವೇಳೆ ಈಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆಡಳಿತ ಮಂಡಳಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹತಿ ರವಾನೆ ಮಾಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿದ್ಯಾರ್ಥಿಗಳನ್ನು ಮುಂಜಾಗ್ರತಾ ಕ್ರಮವಾಗಿ ಮನೆಗೆ ಕಳುಹಿಸುವಂತೆ ಆಡಳಿತ ಮಂಡಳಿಗೆ ಪೊಲೀಸರು ಸೂಚನೆ ನೀಡಿದ್ದಾರೆ.
ಸ್ಥಳದಲ್ಲಿ ಬಾಂಬ್ ಸ್ಕ್ವಾಡ್, ಶ್ವಾನ ದಳದ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.



















