ಚಿಕ್ಕಮಗಳೂರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಜಿತೇಂದ್ರ ಕುಮಾರ್ ದಯಾಮ ಅವರ ಹೆಸರಿನಲ್ಲಿ ಕಿಡಿಗೇಡಿಯೋರ್ವ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದು, ಜಿತೇಂದ್ರ ಕುಮಾರ್ ದಾಯಮ ಅವರು ಜಿಲ್ಲೆಯ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಕಲಿ ಖಾತೆ ಸಕ್ರಿಯಗೊಂಡಿರುವುದು ಅಚ್ಚರಿ ಮೂಡಿಸಿದೆ.
“ಐಪಿಎಸ್ ಜಿತೇಂದ್ರ ಕುಮಾರ್ ದಯಾಮ” ಎಂಬ ನಕಲಿ ಖಾತೆಯಲ್ಲಿ ಚಿಕ್ಕಮಗಳೂರು ಪೊಲೀಸ್ ಇಲಾಖೆಯ ಅಧಿಕೃತ ಚಟುವಟಿಕೆಗಳು ಹಾಗೂ ಪ್ರಮುಖ ಮಾಹಿತಿಗಳನ್ನೇ ನಿರಂತರವಾಗಿ ಪೋಸ್ಟ್ ಮಾಡಲಾಗುತ್ತಿದೆ.
ನಕಲಿ ಖಾತೆ ಸೃಷ್ಟಿಸಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೈಬರ್ ಕ್ರೈಂ ಪೊಲೀಸರು ಮುಂದಾಗಿದ್ದಾರೆ. ಸಾರ್ವಜನಿಕರು ಇಂತಹ ನಕಲಿ ಖಾತೆಗಳ ಬಗ್ಗೆ ಎಚ್ಚರದಿಂದಿರಬೇಕು ಮತ್ತು ಯಾವುದೇ ವೈಯಕ್ತಿಕ ಮಾಹಿತಿ ಹಂಚಿಕೊಳ್ಳಬಾರದು ಎಂದು ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಪೆಟ್ರೋಲ್ ಅಬಕಾರಿ ಸುಂಕ ಇಳಿಕೆಯಾದರೂ ಗ್ರಾಹಕರಿಗಿಲ್ಲ ಲಾಭ?



















