ಕೊಪ್ಪಳ : ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿದಂತೆ ದೇಶಭಕ್ತರ ಪೋಟೋ ಗಳಿಗೆ ಕಿಡಿಗೇಡಿಗಳು ಸಗಣಿ ಎರಚಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ.
ರಾತ್ರಿ ವೇಳೆಯಲ್ಲಿ ಈ ಕೃತ್ಯ ನಡೆದಿದ್ದು, ಬೆಳಗ್ಗೆ ಗ್ರಾಮಸ್ಥರು ಗಮನಿಸಿದ ಬಳಿಕ ವಿಷಯ ಬಹಿರಂಗವಾಗಿದೆ. ಘಟನೆಯಿಂದ ಗ್ರಾಮದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಕುಕನೂರು ಪೊಲೀಸ್ ಠಾಣೆ ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಪಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಮಗು ಸೇರಿ 8 ಜನ ದುರ್ಮರಣ!


















