ಅಮರನ್ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಚಿತ್ರ ಮಂದಿರದ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೇಜರ್ ಮುಕುಂದ್ ವರದರಾಜನ್ ಅವರ ಜೀವನಚರಿತ್ರೆ ಆಧಾರಿತ, ನಟ ಶಿವಕಾರ್ತಿಕೇಯನ್ ಅಭಿನಯದ ‘ಅಮರನ್’ ಸಿನಿಮಾ ಪ್ರದರ್ಶಿಸುತ್ತಿದ್ದ ಚಿತ್ರಮಂದಿರದ ಮೇಲೆ ದುಷ್ಕರ್ಮಿಗಳು ಶನಿವಾರ ದುಷ್ಕರ್ಮಿಗಳು ಬಾಂಬ್ ಎಸೆದಿದ್ದರು.
ಬಾಂಬ್ ಸ್ಫೋಟದ ಬಳಿಕ ಚಿತ್ರಮಂದಿರವನ್ನು ಪ್ರವೇಶಿಸಿದ್ದ ಹಿಂದೂ ಮುನ್ನಾನಿ (ಹಿಂದೂ ಫ್ರಂಟ್) ಕಾರ್ಯಕರ್ತರ ಗುಂಪನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದರು. ಮೇಲಪಾಳ್ಯಂ ಸಿನಿಮಾ ಕಾಂಪ್ಲೆಕ್ಸ್‌ನ ಆವರಣಗೋಡೆಯೊಳಗೆ ದುಷ್ಕರ್ಮಿಗಳಿಬ್ಬರು ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿದ್ದಾರೆ. ಅವು ಸ್ಫೋಟಗೊಂಡರೂ ಚಿತ್ರಮಂದಿರಕ್ಕೆ ಯಾವುದೇ ಹಾನಿಯಾಗಿಲ್ಲ. ಯಾರೂ ಗಾಯಗೊಂಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಈ ಘಟನೆಯನ್ನು ತಮಿಳುನಾಡಿನಲ್ಲಿ ವ್ಯಾಪಕವಾಗಿ ವಿರೋಧಿಸಲಾಗುತ್ತಿದೆ.