ಬೆಳಗಾವಿ: ಗ್ರಾಪಂ ಕಟ್ಟಡದ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಕಲಕಾಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿನ ಗ್ರಾಪಂ ಕಟ್ಟಡದ ಮೇಲೆ ದುಷ್ಕರ್ಮಿಗಳು ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎನ್ನಲಾಗಿದೆ.
ತಡರಾತ್ರಿ ಗ್ರಾಮದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಹಲವು ಕಿಡಿಗೇಡಿಗಳು ಬಿಯರ್ ಬಾಟಲ್ ನಲ್ಲಿ ಪೆಟ್ರೋಲ್ ಸುರಿದು, ಬಟ್ಟೆ ಹಾಕಿ ಬೆಂಕಿ ಹಚ್ಚಿ ಗ್ರಾಪಂ ಕಟ್ಟಡದ ಮೇಲೆ ಎಸೆದು ಹೋಗಿದ್ದಾರೆ ಎನ್ನಲಾಗಿದೆ. ಅಲ್ಲದೇ, ಕ್ಯಾಮರಾದಲ್ಲಿ ಸೆರೆಯಾಗಬಹುದು ಎಂಬ ಕಾರಣಕ್ಕೆ ಕ್ಯಾಮರಾ ಕಿತ್ತು ತೆಗೆದುಕೊಂಡು ಹೋಗಿದ್ದಾರೆ.
ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗ್ರಾಮಕ್ಕೆ ತೆರಳಿರುವ ಪೊಲೀಸರು ಇಂಚಿಂಚೂ ಪರಿಶೀಲನೆ ನಡೆಸುತ್ತಿದ್ದಾರೆ.