ಗದಗ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ನಗರದ ಭೀಷ್ಮ ಕೆರೆ ದಂಡೆಯ ಮೇಲೆ ಈ ಘಟನೆ ನಡೆದಿದೆ. ನಗರದ ತೆಗ್ಗಿನಲಾಟ್‌ನ ಯಲ್ಲಪ್ಪ ಸಲಗಾರ ಎಂಬ ವ್ಯಕ್ತಿ ಮೂತ್ರ ವಿಸರ್ಜನೆಗೆ ತೆರಳಿದಾಗ ಈ ಅವಘಡ ಸಂಭವಿಸಿದೆ. ಪಾಶ್ವವಾಯು ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಕುಸಿದು ಬಿದ್ದಿದ್ದಾರೆ. ಯಾರೂ ಗಮನಿಸದ ಹಿನ್ನಲೆಯಲ್ಲಿ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗದಗ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ.