ಬೆಂಗಳೂರು: ಟ್ಯೂಷನ್ ಗೆ ತೆರಳಿದ್ದ ಬಾಲಕನೊಬ್ಬ ನಾಪತ್ತೆಯಾಗಿ, ಬಳಿಕ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಅರಕೆರೆ ಶಾಂತಿನಿಕೇತನ್ ಬಡಾವಣೆಯಲ್ಲಿ ನಡೆದಿದೆ. ನಿಶ್ಚಿತ್ ನಾಪತ್ತೆಗಾದ ಯುವಕ.
ಟ್ಯೂಷನ್ ತೆರಳಿದ್ದ ಬಾಲಕ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅರಕೆರೆ ಶಾಂತಿನಿಕೇತನ್ ಬಡಾವಣೆಯಿಂದ ಕಾಣೆಯಾಗಿದ್ದಾನೆ. ಈ ಸಂಬಂಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೂರನ್ನು ಆಧರಿಸಿದ ಪೊಲೀಸರು ಎಲ್ಲಾ ಕಡೆ ಬಾಲಕನಿಗಾಗಿ ಹುಡುಕಾಟ ನಡೆಸಲಾಗಿತ್ತು. ಬನ್ನೇರುಘಟ್ಟ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬಾಲಕನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪರಿಶೀಲನೆ ವೇಳೆ ಕಿಡ್ನಾಪ್ ಮಾಡಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದ್ದು, ಯಾವ ವಿಚಾರಕ್ಕೆ ಯಾರು ಕೊಲೆ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಆರೋಪಿಗಳು ಪತ್ತೆಯಾದ ಬಳಿಕ ಕೊಲೆಗೆ ಕಾರಣ ತಿಳಿಯಲಿದೆ ಎಂದು ಘಟನಾ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಜಂಟಿ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.