ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಭೋವಿ ಸಮಾಜ ಸಿಡಿದೆದ್ದಿದೆ. ಎಸ್.ಸಿ, ಎಸ್.ಟಿಯ ಅನುದಾನ ದುರ್ಬಳಕೆ ಹಾಗೂ ಭೋವಿ ಸಮಾಜಕ್ಕೆ ಅನುದಾನ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ್ಯಾಲಿ ನಡೆಸಲಾಯಿತು.
ಈ ವೇಳೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ಭೋವಿ ಅಭಿವೃದ್ಧಿ ನಿಗಮಕ್ಕೆ ಸಮರ್ಪಕ ಅನುದಾನ ನೀಡದೇ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ರಾಜ್ಯ ಸರ್ಕಾರದ ಅನ್ಯಾಯವನ್ನು ನಾವು ಸಹಿಸುವುದಿಲ್ಲ. ಭೋವಿ ಸಮಾಜದ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡದೇ ಹೋದರೆ ಇನ್ನೂ ಉಗ್ರ ಹೋರಾಟ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಭೋವಿ ಸಮಾಜದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.



















