ಮಂಗಳೂರು: ಆನ್ಲೈನ್ ವಂಚನೆಗಾಗಿ (Online fraud) ಬಡ ಜನರ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಬೆಳಗಾವಿ (Belagavi) ತಹಸೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್ (28), ರಾಮದೇವ ಗಲ್ಲಿಯ ಅನೂಪ್ ಕಾರೇಕರ್ (42) ಎನ್ನಲಾಗಿದೆ.
ದಕ್ಷಿಣ ಕನ್ನಡ ಸೈಬರ್ ಕ್ರೈಂ (Cyber Crime) ಪ್ರಕರಣದ ತನಿಖೆ ವೇಳೆ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಗಳು ಅಮಾಯಕರಿಗೆ ಚಿಲ್ಲರೆ ಹಣ ನೀಡಿ ಬ್ಯಾಂಕ್ ಖಾತೆ ತೆರೆಯಲು ಹೇಳುತ್ತಾರೆ. ನಂತರ ಆರೋಪಿಗಳು ಆ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಪಡೆದುಕೊಂಡು, ಆನ್ ಲೈನ್ ಬ್ಯುಸಿನೆಸ್ ಮಾಡುವುದಾಗಿ ಹೇಳಿ, ಸೈಬರ್ ವಂಚಕರಿಗೆ ನೀಡುತ್ತಿದ್ದರು ಎನ್ನಲಾಗಿದೆ.
ಸೈಬರ್ ವಂಚಕರು ಈ ಬ್ಯಾಂಕ್ ಖಾತೆಗಳನ್ನು ಇಟ್ಟುಕೊಂಡು, ಶ್ರೀಮಂತ ಜನರಿಗೆ ವಿಡಿಯೊ ಕಾಲ್, ಡಿಜಿಟೆಲ್ ಅರೆಸ್ಟ್ ಸೇರಿದಂತೆ ಹಲವು ವಿಧಾನಗಳಲ್ಲಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಆನಂತರ ವಂಚಕರ ಜಾಲಕ್ಕೆ ಸಿಲುಕಿದವರ ಕಡೆಯಿಂದ ಮುಗ್ದ ಜನರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿಸುತ್ತಾರೆ.
ಪುತ್ತೂರಿನ ರಾಧಾಕೃಷ್ಣ ನಾಯಕ್ ಎಂಬುವವರಿಗೆ ಸೈಬರ್ ವಂಚಕರು ವಿಡಿಯೋ ಕಾಲ್ ಮಾಡಿ ಡಿಜಿಟಲ್ ಅರೆಸ್ಟ್ ಮಾಡಿದ್ದರು. ಆ ಬಳಿಕ 40 ಲಕ್ಷ ರೂ. ಹಣವನ್ನ ಆರ್ಟಿಜಿಎಸ್ ಮೂಲಕ ಪಡೆದಿದ್ದರು. ಕೆಲವು ದಿನಗಳ ಬಳಿಕ ಅನುಮಾನಗೊಂಡ ರಾಧಾಕೃಷ್ಣರವರು ಸಿಇಎನ್ ಠಾಣೆಗೆ ದೂರು ನೀಡಿದತ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.