ಬೆಂಗಳೂರು: ಮಣಿಪಾಲದಲ್ಲಿರುವ ಮಣಿಪಾಲ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (MIT Manipal Research Associate Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ರಿಸರ್ಚ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಣಿಪಾಲ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಮಣಿಪಾಲ
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 17
ಅರ್ಜಿ ಸಲ್ಲಿಕೆ ವಿಧಾನ: ಇ-ಮೇಲ್
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್ ಅಥವಾ ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಂಐಟಿಯ ಸ್ಕೂಲ್ ಆಫ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಸಂಸ್ಥೆಯಲ್ಲಿ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 63,220 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ https://www.manipal.edu/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು jobs.research@manipal.edu ಗೆ ಮೇಲ್ ಮಾಡಬೇಕು. ಹೆಚ್ಚಿನ ಮಾಹಿತಿಗೆ 0820-2923433 ಸಂಪರ್ಕಿಸಿ.



















