ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ (Munirathna) ಅವರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದ ಕೆ.ಎನ್. ಶಿವಕುಮಾರ್ ಅವರು ಅಕ್ಟೋಬರ್ 5ರ ವರೆಗೆ ಎಸ್ ಐಟಿ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಶುಕ್ರವಾರವೇ ಮುನಿರತ್ನ ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್ ಮಾಡಲಾಗಿತ್ತು. ಈ ಪ್ರಕರಣವನ್ನು ಎಸ್ ಐಟಿಗೆ ವಹಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ ಇಂದು ಅವರನ್ನು ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಜೈಲಿನಿಂದ ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ಅಲ್ಲದೇ, ಅವರ ವಿರುದ್ಧ ಇನ್ನೂ ಹಲವಾರು ಆರೋಪಗಳಿವೆ. ಮುನಿರತ್ನ ಬಳಿ ಹಲವಾರು ಖಾಸಗಿ ಅಶ್ಲೀಲ ವಿಡಿಯೋಗಳಿವೆ. ರಾಜಕೀಯ ಎದುರಾಳಿಗಳನ್ನು ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಈ ಕುರಿತು ಎಸ್ ಐಟಿ ತನಿಖೆ ನಡೆಸಲಿದೆ.