ಬೆಂಗಳೂರು: ಪೊಲೀಸರ ವಶದಲ್ಲಿದ್ದ ಶಾಸಕ ಮುನಿರತ್ನ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿರುವ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಎರಡು ದಿನಗಳಿಂದಲೂ ವಿಚಾರಣೆ ನಡೆಸುತ್ತಿದ್ದಾರೆ.
ಆದರೆ, ಸೋಮವಾರ ಸಂಜೆ ಏಕಾಏಕಿ ಅವರನ್ನು ಪೊಲೀಸರು ಜಯದೇವ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸಂಜೆ ಬೌರಿಂಗ್ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಲಾಗಿತ್ತು. ಕಾರ್ಡಿಯಾಲಜಿಸ್ಟ್ ಗೆ ತೋರಿಸುವಂತೆ ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಕಳೆದ 1 ಗಂಟೆಯಿಂದ ಮುನಿರತ್ನಗೆ ವೈದ್ಯರು ಚಿಕಿತ್ಸೆ ನೀಡಲಾಗುತ್ತಿದೆ.
ಅಲ್ಲದೇ, ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ಮುಂದುವರಿದೆ ಎನ್ನಲಾಗಿದೆ. ಬಂಧನದಿಂದಾಗಿ ಶಾಸಕರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.