ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಮತ್ತು ಆತನ ಬೆಂಬಲಿಗರು ಧರ್ಮಸ್ಥಳ ಕ್ಷೇತ್ರದ ಮೇಲೆ ಅಪಪ್ರಚಾರ ಎಸಗುತ್ತಿದ್ದಾರೆ ಎಂದು ಆರೋಪಿಸಿ ಯಲಹಂಕ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೋ” ಬೃಹತ್ ಕಾರ್ ಜಾಥಾ ಆರಂಭವಾಗಿದೆ.
ನೆಲಮಂಗಲ ಟೋಲ್‍ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರೆಗೆ ನಡೆಯುವ “ಧರ್ಮಸ್ಥಳ ಚಲೋ” ಜಾಥಾದಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಸುಮಾರು 500ಕ್ಕೂ ಹೆಚ್ಚು ಕಾರುಗಳಿಂದ ಬಿಜೆಪಿ ಹಾಗೂ ಹಿಂದೂ ಕಾರ್ಯತಕರ್ತರು ಭಾಗಿಯಾಗಿದ್ದಾರೆ.
ಬೃಹತ್ ಕಾರ್ ಜಾಥಾಕ್ಕೆ ಪೂಜಾ ವಿಧಿವಿಧಾನ ನೆರವೇರಿಸಿ ಚಾಲನೆ ನೀಡಲಾಯಿತು. ಇಂದು ಸಂಜೆ ಶಾಸಕರ ನೇತೃತ್ವದ ತಂಡ ಧರ್ಮಸ್ಥಳದ ಶ್ರೀ ಮಂಜುನಾಥನ ದರ್ಶನ ಪಡೆದು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ನೈತಿಕ ಬೆಂಬಲ ಸೂಚಿಸಲಿದೆ.