ಕೋಲಾರದಲ್ಲಿ ನಡೆದ ದಿಶಾ ಸಭೆಯ ಬಳಿಕ ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಬೇಸರ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕೇಳಿಬರುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬೆಂಬಲಕ್ಕೆ ನಿಂತಿರುವ ಶಾಸಕರು, “ಸಿಟಿ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಯಾವುದೋ ಒತ್ತಡದಲ್ಲಿ ಮಾತನಾಡಿದ್ದಾರೆ. ಕರ್ಮ ಯಾರನ್ನೂ ಬಿಡಲ್ಲ, ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಸಿಂಹಸ್ವಪ್ನವಾಗಿದ್ದಾರೆ” ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಪಕ್ಷದವರೇ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ, ಇದೀಗ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಭೇಟಿಯಾಗಿ ವರದಿ ಕೊಟ್ಟು ತೆರೆ ಎಳೆಯಲು ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ
















