ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (94) ಕೆಲ ವಯೋಸಹಜ ಕಾಯಿಲೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಶಾಮನೂರು ಶಿವಶಂಕರಪ್ಪನವರ ಆರೋಗ್ಯ ವಿಚಾರಿಸಿದ್ದಾರೆ.
ಈ ವೇಳೆ ಆಸ್ಪತ್ರೆಯಲ್ಲಿದ್ದ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾವನ ಆರೋಗ್ಯದ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಎಚ್ ಆಂಜನೇಯ ಸಾಥ್ ನೀಡಿದ್ದಾರೆ.
ಇದನ್ನೂ ಓದಿ : ಬೈಜು ರವೀಂದ್ರನ್‌ಗೆ ಶಾಕ್ | 9 ಸಾವಿರ ಕೋಟಿ ದಂಡ ವಿಧಿಸಿದ ಅಮೆರಿಕ ಕೋರ್ಟ್!



















