ಉಡುಪಿ : ಪರಶುರಾಮನ ಮೂರ್ತಿಯ ಚಿತ್ರವನ್ನು ವಿಕಾರಗೊಳಿಸಿ ಅದಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಮುಖವನ್ನು ಅಳವಡಿಸಿದಂತೆ ವಿನ್ಯಾಸಗೊಳಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದಲೇ ಈ ಪೋಸ್ಟ್ ಹಂಚಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಜುಲೈ 3ರಂದು ಫೇಸ್‌ಬುಕ್‌ನಲ್ಲಿ ಈ ಪೋಸ್ಟ್ ಗಮನಿಸಿದ ಉಡುಪಿಯ ಸುಮಂತ್ ಶೆಟ್ಟಿಗಾರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಗುರು ಪಿ ಉದ್ಯಾವರ’ ಹೆಸರಿನ ಫೇಸ್‌ಬುಕ್ ಖಾತೆಯಿಂದ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೋಸ್ಟ್‌ನ್ನು ಯಾರು ಅಪ್‌ಲೋಡ್ ಮಾಡಿದ್ದಾರೆ, ಅದರ ಹಿಂದೆ ಇರುವ ವ್ಯಕ್ತಿಗಳು ಯಾರು ಹಾಗೂ ಘಟನೆಯ ಹಿನ್ನೆಲೆ ಏನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!


















