ಮಂಗಳೂರು : ದಕ್ಷಿಣ ಕನ್ನಡದ ಮೂಡುಬಿದ್ರೆ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ರಕ್ಷಣೆ ಕೋರಿ ಬಂದ ಮಹಿಳೆಯರಿಗೆ ಇನ್ಸ್‌ಪೆಕ್ಟರ್ ಸಂದೇಶ್ ಲೈಂಗಿಕ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋಗಳು ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ, ಇನ್ಸ್‌ಪೆಕ್ಟರ್ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.
ಈ ಮಧ್ಯೆ ಇನ್ಸ್‌ಪೆಕ್ಟರ್ ಸಂದೇಶ್‌ರನ್ನು ಅಮಾನತು ಮಾಡಿ ತನಿಖೆ ನಡೆಸುವಂತೆ ಮೂಡುಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಗೃಹ ಸಚಿವ ಪರಮೇಶ್ವರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಸದ್ಯ ಮಂಗಳೂರು ಉತ್ತರ ಎಸಿಪಿ ಕಛೇರಿಯಲ್ಲಿ ಇನ್ಸ್‌ಪೆಕ್ಟರ್ ಸಂದೇಶ್ ಅವರ ವಿಚಾರಣೆ ನಡೆಯುತ್ತಿದೆ. ಮಂಗಳೂರು ನಗರ ಉತ್ತರ ಎಸಿಪಿ ಶ್ರೀಕಾಂತ್ ವಿಚಾರಣೆ ಮಾಡುತ್ತಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಕಮೀಷನರ್ ಸೂಚನೆ ನೀಡಿರುವ ಹಿನ್ನೆಲೆ ಕಳೆದ ಎರಡು ಗಂಟೆಯಿಂದ ಸಂದೇಶ್‌ರನ್ನು ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ಸ್ನೇಹಿತ ವಿಡಿಯೋ ಮಾಡುತ್ತಿದ್ದಾಗಲೇ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಸಾವು!



















