ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗಾಗಲೇ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಯೆಂದು ಘೋಷಿಸಿದ್ದು, ಇಂದು ಬೆಳಗ್ಗೆ ಸುಮಾರು 11:30ರ ವೇಳೆಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ತಿಳಿಸಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ಘೋಷಿಸಲಿದ್ದಾರೆ.
ದೋಷಿಗಳೆಂದು ತೀರ್ಪು ಹೊರಬಂದ ತಕ್ಷಣ, ಪ್ರಕರಣದ ತನಿಖೆ ನಡೆಸಿದ ಕೇಂದ್ರ ತನಿಖಾ ದಳ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿಯನ್ನು ಪರಪ್ಪನ ಅಗ್ರಹಾರ ಜೈಲುಗೆ ಸ್ಥಳಾಂತರಿಸಲಾಗಿದೆ.
2016ರ ಜೂನ್ 16ರಂದು ನಡೆದಿದ್ದ ಈ ಹತ್ಯೆಯಲ್ಲಿ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡರನ್ನು ಕೊಲೆ ಮಾಡಲಾಗಿತ್ತು. ಪ್ರಕರಣವು 2019ರಲ್ಲಿ ಸಿಬಿಐಗೆ ವರ್ಗಾಯಿಸಲ್ಪಟ್ಟಿತ್ತು. ಭಾರತೀಯ ದಂಡ ಸಂಹಿತೆಯ 120B, 302, 143, 147, 148 ಮತ್ತು 149 ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. 2021ರ ಏಪ್ರಿಲ್‌ನಿಂದ ವಿಚಾರಣೆ ಆರಂಭಗೊಂಡಿದ್ದು, ಸುಮಾರು ಆರು ವರ್ಷಗಳ ಕಾಲ ನಡೆದ ವಿಚಾರಣೆಯ ಬಳಿಕ ನ್ಯಾಯಾಲಯ ಇದೀಗ ದೋಷಾರೋಪಣೆ ತೀರ್ಪು ನೀಡಿದೆ.
ಇದನ್ನೂ ಓದಿ : ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್ ಮಹತ್ವದ ಆದೇಶ


















