ಬೆಂಗಳೂರು: ಜಿಪಂ ಸದಸ್ಯ ಹತ್ಯೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಕೋರ್ಟ್ ಗೆ ಶರಣಾಗಿದ್ದಾರೆ. ಕೋರ್ಟ್, ಸಿಬಿಐ ವಶಕ್ಕೆ ನೀಡಿ ಆದೇಶ ನೀಡಿದೆ.
ಧಾರವಾಡ ಜಿಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ (yogesh gowda) ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಹೀಗಾಗಿ ಇಂದು ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
2016 ರ ಜೂ. 15 ರಂದು ಹೆಬ್ಬಳ್ಳಿ ಜಿಪಂ ಸದಸ್ಯನಾಗಿದ್ದ ಯೋಗೀಶಗೌಡನನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಕೈವಾಡವಿದೆ ಎಂದು ಆರೋಪಿಸಿ 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜಾಮೀನು ಪಡೆದು ಹೊರ ಬಂದಿದ್ದರು. ಇತ್ತೀಚೆಗೆ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಸಿಬಿಐಗೆ ಶರಣಾಗಿದ್ದಾರೆ.