ಮಾಜಿ ಸಚಿವ ವಿನಯ ಕುಲಕರ್ಣಿ ನಿವಾಸದಲ್ಲಿ ಇಡಿ ಪರಿಶೀಲನೆ ಇನ್ನೂ ಮುಂದುವರೆದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮನೆಯಲ್ಲಿ ನಿರಂತರ 24 ಗಂಟೆಗಳಿಂದಲೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
16 ಅಧಿಕಾರಿಗಳು ನಾಲ್ಕು ಕಾರುಗಳಲ್ಲಿ ಬಂದಿದ್ದು, ರಾತ್ರಿಯಿಡೀ ದಾಖಲಾತಿ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಇಡಿ ಅಧಿಕಾರಿಗಳು ವಿನಯ್ ಕುಲಕರ್ಣಿ ಬ್ಯಾಂಕ್ ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ಅನುಮಾನದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಂಚನೆಯ ಆರೋಪ ಎದುರಿಸುತ್ತಿರುವ ಐಶ್ವರ್ಯ ಗೌಡಳ ಕಾರು ಶಾಸಕ ವಿನಯ್ ಕುಲಕರ್ಣಿ ಮನೆಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಇಬ್ಬರ ಮಧ್ಯೆ ಹಣದ ವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಅನುಮಾನದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಶಾಸಕ ವಿನಯ್ ಕುಲಕರ್ಣಿ ಮನೆಯಲ್ಲೇ ಇದ್ದಾರೆ.