ಬೆಂಗಳೂರು ಗ್ರಾಮಾಂತರ: ಆಂಧ್ರಪ್ರದೇಶದ ಶಾಸಕರೊಬ್ಬರ ಕಾರು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಶಾಸಕ ಅಮಲಿನೇನಿ ಸುರೇಂದ್ರ ಬಾಬು ಅವರು ಚಲಿಸುತ್ತಿದ್ದ ಕಾರು ಅಪಘಾತವಾಗಿದೆ. ದೇವನಹಳ್ಳಿ ತಾಲ್ಲೂಕು ಆವತಿ ಗ್ರಾಮದ ಸೇತುವೆ ಮೇಲೆ ಈ ಘಟನೆ ನಡೆದಿದೆ. ಶಾಸಕರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುರೇಂದ್ರಬಾಬು ಅವರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕಲ್ಯಾಣದುರ್ಗ ಕ್ಷೇತ್ರದ ಶಾಸಕರು.
ಘಟನೆಯಲ್ಲಿ ದಿಬ್ಬೂರು ಗ್ರಾಮದ ರೈತ ಲವಣ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವೇಳೆ ಶಾಸಕರಿಗೆ ಸೇರಿದ ಎರಡು ಕಾರುಗಳು ಅಪಘಾತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.