ನರೇಂದ್ರ ಮೋದಿ(Narendra Modi) ಅವರನ್ನು 18ನೇ ಲೋಕಸಭೆಯ ನಾಯಕರಾಗಿ ಆಯ್ಕೆಯಾಗಿದ್ದಾರೆ. ಎನ್ ಡಿಎ ಸಂಸದರು ನಾಯಕನನ್ನಾಗಿ ಘೋಷಿಸಿದ್ದಾರೆ.
ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಇಂದು ಅಧಿಕೃತವಾಗಿ ಎನ್ ಡಿಎ ಮೈತ್ರಿಯ ಎಲ್ಲ ಸಂಸದರು ಆಯ್ಕೆ ಮಾಡಿದ್ದಾರೆ.
ಹೀಗಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಕೋರಲಿದೆ. ನಂತರ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಟಿಡಿಪಿ, ಜೆಡಿಯು, ಶಿಂಧೆ ನೇತೃತ್ವದ ಶಿವಸೇನಾ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಕ್ರಮವಾಗಿ 16, 12, 7 ಮತ್ತು 5 ಸ್ಥಾನಗಳನ್ನು ಗೆದ್ದಿದ್ದು ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿವೆ. ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್, ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ತೆಲುಗು ದೇಶಂ ಪಕ್ಷದ ಅಧ್ಯಕ್ಷ, ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಮಹಾರಾಷ್ಟ್ರ ಸಿಎಂ ಶಿಂಧೆ, ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್, ಲೋಕ ಜನಶಕ್ತಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.