ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿ, ಕನಕನ ಕಿಂಡಿಯ ಮೂಲಕ ಕೃಷ್ಣ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಉದ್ಘಾಟಿಸಿ, ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಭಾಗವಹಿಸಿದರು.
ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕದ ಕರಾವಳಿ ಹಾಗೂ ಕೃಷ್ಣನ ಊರು ಉಡುಪಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನ ಮಾಡಿದರು.
ಈ ವೇಳೆ ಅವರು ಸ್ವರ್ಣ ಲೇಪಿತ ತೀರ್ಥ ಮಂಟಪ ಉದ್ಘಾಟನೆ ಕೂಡ ಮಾಡಿದ್ದಾರೆ. ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷ ಪೂರ್ಣವಾದ ಹಿನ್ನಲೆಯಲ್ಲಿ ಎರಡು ಕೋಟಿ ವೆಚ್ಚದಲ್ಲಿ ತೀರ್ಥ ಮಂಟಪಕ್ಕೆ ಸ್ವರ್ಣ ಲೇಪನ ಮಾಡಲಾಗಿದೆ. ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಲಾಯಿತು. ಮಠಾಧೀಶರು ಗಣ್ಯರು ಈ ವೇಳೆ ಉಪಸ್ಥಿತರಿದ್ದರು.ಅದಾದ ಬಳಿಕ ಮೋದಿ ಮುಖ್ಯಪ್ರಾಣ ದೇವರ ಗರುಡ ದೇವರ ದರ್ಶನ ಮಾಡಿದ್ದಾರೆ.
ಆ ಬಳಿಕ ಮಠಾಧೀಶರೊಂದಿಗೆ ಪ್ರಧಾನಿ ಮೋದಿ ಮಾತುಕತೆ ಮಾಡಿದರು. ಮಠದ ಪರಿಸರದಲ್ಲಿ ವೈದಿಕರಿಂದ ಉಪನಿಷತ್ತು, ವೇದ, ಗೀತೆ ಪಠಣ ಮಾಡಲಾಗುತ್ತಿತ್ತು.
ಇದನ್ನೂ ಓದಿ : ಮಷೀನ್‌ನಲ್ಲೇ ಎಟಿಎಂ ಕಾರ್ಡ್ ಸಿಲುಕಿಕೊಂಡರೆ ಏನು ಮಾಡಬೇಕು? ಇಲ್ಲಿದೆ ನೋಡಿ ಮಾಹಿತಿ



















