ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣಕ್ಕೆ ಆಗಮಿಸಿ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿ ಆರ್.ವಿ.ರಸ್ತೆಯ (ರಾಗೀಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲೆ ಮೋದಿ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲ ಥಾವರ್ ಚಾಂದ್ ಗೆಲ್ಹೋಟ್, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಮನೋಹರ್ ಲಾಲ್, ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಸಂಸದ ಡಾ. ಸಿ.ಎನ್ ಮಂಜುನಾಥ್, ಸಂಸದ ತೇಜಸ್ವಿ ಸೂರ್ಯ, ಸಚಿವ ಭೈರತಿ ಸುರೇಶ್, ಸಂಸದೆ ಶೋಭಾ ಕರಂದ್ಲಾಜೆ ಸೇರಿ ಬಿ.ಎಂ.ಆರ್.ಸಿ.ಎಲ್ ನ ಅಧಿಕಾರಿಗಳು ಸೇರಿ ಪ್ರಮುಖರು ಉಪಸ್ಥಿತರಿದ್ದರು.