ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕುವೈತ್ ಪ್ರವಾಸದಲ್ಲಿದ್ದು, ಇಂದು ಅನಿವಾಸಿ ಭಾರತೀಯರನ್ನು ಉದ್ಧೇಶಿಸಿ ಮಾತನಾಡಿದ್ದಾರೆ. ಅಲ್ಲದೇ, ಕುವೈತ್ ಮಿನಾ ಅಬ್ದುಲ್ಲಾ ಪ್ರದೇಶದಲ್ಲಿನ ಗಲ್ಫ್ ಸ್ಪಿಕ್ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಿದ್ದಾರೆ.
ಭಾರತದ ವಿವಿಧ ರಾಜ್ಯಗಳ ಸುಮಾರು 1,500 ಪ್ರಜೆಗಳೊಂದಿಗೆ ಸಂವಾದ ನಡೆಸಿದ್ದಾರೆ. ಕಾರ್ಮಿಕರಿಗೆ ತಿಂಡಿ ಬಡಿಸಿ, ಯೋಗಕ್ಷೇಮ ಕೇಳಿದ್ದಾರೆ.
ವಿದೇಶದಲ್ಲಿರುವ ಭಾರತೀಯ ಕಾರ್ಮಿಕರ ಪರಿಸ್ಥಿತಿಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಮಹತ್ವದ ದಾಪುಗಾಲು ಇಟ್ಟಿದ್ದಾರೆ. ಭಾರತೀಯರೊಂದಿಗೆ ಪ್ರಧಾನಿ ಮೋದಿ ಬೆರೆದ ರೀತಿ ಕಂಡು ಅನಿವಾಸಿ ಜನರು ಸಂತಸ ವ್ಯಕ್ತಪಡಿಸಿದ್ದಾರೆ.