ನವ ದೆಹಲಿ : ಮಣಿಪುರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ 8,500 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 2023ರಲ್ಲಿ ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಹಿಂಸಾಚಾರದ ನಂತರ ಮಣಿಪುರಕ್ಕೆ ಪ್ರಧಾನಿಯ ಮೊದಲ ಭೇಟಿ ಇದಾಗಿದೆ.
ಜನಾಂಗೀಯ ಘರ್ಷಣೆಗಳು ಮಣಿಪುರವನ್ನು ತಲ್ಲಣಗೊಳಿಸಿದ 2 ವರ್ಷಗಳ ಬಳಿಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಎರಡು ಸಮುದಾಯಗಳ ನಡುವೆ ನಡೆದ ಸಂಘರ್ಷದ ಸಂದರ್ಭದಲ್ಲಿ ಎಂದೂ ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡುವ ಯಾವ ಒಲವನ್ನೂ ತೋರಿಸಿರಲಿಲ್ಲ. ಅಂದು ಕೂಡ ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿ ಹದಗೊಳಿಸುವುದಕ್ಕೆ ಪ್ರಯತ್ನ ಮಾಡದ ಬಗ್ಗೆ ರಾಷ್ಟ್ರಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಇಂದು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಮೋದಿ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, ಇದು ರಾಜಕೀಯ ಲಾಭಕ್ಕಾಗಿ ಎಂದು ವಿಪಕ್ಷಗಳು ಟೀಕಿಸಿವೆ.



















