ಬೈಂದೂರು : ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಸೆ.೧೭ರಿಂದ ಆಯೋಜಿಸುತ್ತಿರುವ ಸೇವಾ ಪಾಕ್ಷಿಕದ ಅಂಗವಾಗಿ, ಬೈಂದೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ನಡೆಯಿತು.
ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ ನೆಡೆದ ಬೃಹತ್ ರಕ್ತದಾನ ಶಿಬಿರಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ದೀಪ ಬೆಳಗುವುದರ ಮೂಲಕ ಚಾಲನೆಯನ್ನು ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ನಡೆಯುತ್ತಿರುವ ಈ ಶಿಬಿರದಲ್ಲಿ ಸ್ಥಳೀಯರು, ರಕ್ತದಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸದರು.
ಇನ್ನು, ರಕ್ತದಾನ ಶಿಬಿರದ ಕುರಿತಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಹಾಗೂ ಬೈಂದೂರು ಯುವ ಮೋರ್ಚಾದ ಅಧಯಕ್ಷ ಗಜೇಂದ್ರ ಎಸ್ ಬೇಲೆಮನೆ ಕರ್ನಾಟಕ ನ್ಯೂಸ್ ಬೀಟ್ ಜೊತೆ ಮಾತನಾಡಿದರು.
ಇನ್ನು, ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ, ಬೈಂದೂರು ಮಂಡಲ ಅಧ್ಯಕ್ಷರಾದ ಅನಿತಾ ಆರ್ ಕೆ, ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಕರಣ್ ಪೂಜಾರಿ,ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ ಇದರ ಅಧ್ಯಕ್ಷ ಸತೀಶ್ ಸಾಲ್ಯಾನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತ ನಿಧಿ ಕುಂದಾಪುರ ಇದರ ಕಾರ್ಯದರ್ಶಿಗಳಾದ ಸತ್ಯನಾರಾಯಣ ಪುರಾಣಿಕ್ ಸೇರಿ ಹಲವರು ಉಪಸ್ಥಿತರಿದ್ದರು.