ಬೆಂಗಳೂರು: ಪ್ರಧಾನಿ ಮೋದಿ ಜನ್ಮದಿನದ ಹಿನ್ನೆಲೆ ಬಿಜೆಪಿ ನಾಯಕರು ಸಮಾಜಸೇವಾ ಕಾರ್ಯಗಳೊಂದಿಗೆ ಮೋದಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.
ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಇಂದು (ಸೆ.17) ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ರಕ್ತದಾನ ಶಿಬಿರ, ಚಿತ್ರ ಪ್ರದರ್ಶನ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮೋದಿಯವರ ಜೀವನಾಧಾರಿತ ಚಿತ್ರದ ಪ್ರದರ್ಶನವನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಉದ್ಘಾಟಿಸಿದರು. ಇದೇ ವೇಳೆ ರಕ್ತದಾನ ಶಿಬಿರಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಚಾಲನೆ ನೀಡಿದ್ದಾರೆ.
ರಕ್ತದಾನ ಶಿಬಿರದಲ್ಲಿ ಸುಮಾರು 75 ಬಾಟಲ್ ರಕ್ತವನ್ನು ಸಂಗ್ರಹಿಸಲಾಯಿತು. ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



















