ನವದೆಹಲಿ: 2023ರಲ್ಲಿ ಭಾರತದಲ್ಲಿ ನಡೆದ ವಿಶ್ವ ಕಪ್ ವೇಳೆ ಕಾಲು ನೋವಿಗೆ ಒಳಗಾಗಿದ್ದ ಮೊಹಮ್ಮದ್ ಶಮಿ ಭಾರತ ತಂಡಕ್ಕೆ ಮತ್ತೆ ಬಂದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ (IND vs ENG) 15 ಸದಸ್ಯರ ಭಾರತ ತಂಡವನ್ನು (India’s squad for T20I series) ಬಿಸಿಸಿಐ ಪ್ರಕಟಿಸಿದ್ದು ಅಲ್ಲಿ ಅವರು ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ದೀರ್ಘ ಕಾಲದ ಪುನಶ್ಚೇತನ ಪಡೆದುಕೊಂಡಿದ್ದಾರೆ.
ವಿಶೇಷ ಎಂದರೆ ಸೂರ್ಯಕುಮಾರ್(suryakumar) ಜತೆಗೆ ಸ್ಪಿನ್ ಆಲ್‌ರೌಂಡರ್ ಅಕ್ಷರ್ ಪಟೇಲ್‌ಗೆ ಉಪ ನಾಯಕತ್ವವನ್ನು ನೀಡಲಾಗಿದ್ದು, ವಿಕೆಟ್ ಕೀಪರ್ ರಿಷಭ್ ಪಂತ್ (rishabh pant)ಅವರನ್ನು ಕೈ ಬಿಡಲಾಗಿದೆ. ಕಳೆದ ಸರಣಿಯಂತೆ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವರನ್ನು ಉಳಿಸಿಕೊಂಡರೆ, ಎರಡನೇ ಆಯ್ಕೆಯಾಗಿ ಧ್ರುವ್ ಜುರೆಲ್‌ಗೆ ಸ್ಥಾನ ಕಲ್ಪಿಸಲಾಗಿದೆ.
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಬಳಿಕ ಮೊಹಮ್ಮದ್ ಶಮಿ ಅವರು ಪಾದದ ಗಾಯದಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಆದರೆ, ಅವರ ಕಾಲಿನಲ್ಲಿ ಊತ ಕಾಣಿಸಿಕೊಂಡಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದರು. ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದು, ರಾಷ್ಟ್ರೀಯ ತಂಡಕ್ಕೆ ಕಮ್‌ಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ.
ರಿಷಭ್ ಪಂತ್‌ಗೆ ನೋ ಚಾನ್ಸ್
ಶ್ರೀಲಂಕಾ ಪ್ರವಾಸದಲ್ಲಿ ಕೊನೆಯ ಬಾರಿ ಟಿ20ಐ ಸರಣಿಯಲ್ಲಿ ಕಾಣಿಸಿಕೊಂಡಿದ್ದ ರಿಷಭ್ ಪಂತ್ ಅವರನ್ನು ಇಂಗ್ಲೆಂಡ್ ವಿರುದ್ದದ ಟಿ20ಐ ಸರಣಿಯಿಂದ ಕೈ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಧ್ರುವ್ ಜುರೆಲ್ ಅವರನ್ನು ಎರಡನೇ ಆಯ್ಕೆಯ ವಿಕೆಟ್ ಕೀಪರ್ ಆಗಿ ಆರಿಸಲಾಗಿದೆ. ಇನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್, ಇಂಗ್ಲೆಂಡ್ ವಿರುದ್ಧ ಕಣಕ್ಕೆ ಇಳಿಯುವುದು ಬಹುತೇಕ ಖಚಿತ. ಇವರು ಕಳೆದ ಐದು ಟಿ20ಐ ಪಂದ್ಯಗಳಲ್ಲಿ 3 ಶತಕಗಳನ್ನು ಬಾರಿಸಿದ್ದರು.
ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್ , ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪ ನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್)