ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಲ್ಲಿ (MoHFW Recruitment 2026) ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 7 ಪ್ರೈವೇಟ್ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಒಟ್ಟು ಹುದ್ದೆಗಳು: 07
ಹುದ್ದೆಗಳ ಹೆಸರು: ಪ್ರೈವೇಟ್ ಸೆಕ್ರೆಟರಿ
ಉದ್ಯೋಗ ಸ್ಥಳ: ನವದೆಹಲಿ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 2
ಒಂದು ಸೀನಿಯರ್ ಪ್ರಿನ್ಸಿಪಲ್ ಪ್ರೈವೇಟ್ ಸೆಕ್ರೆಟರಿ, ಒಂದು ಪ್ರಿನ್ಸಿಪಲ್ ಪ್ರೈವೇಟ್ ಸೆಕ್ರೆಟರಿ, 4 ಪ್ರೈವೇಟ್ ಸೆಕ್ರೆಟರಿ ಹಾಗೂ ಒಂದು ಸ್ಟೆನೊಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 25,500 ರೂಪಾಯಿಯಿಂದ 2.08 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲು mohfw.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಪೋಸ್ಟ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
National Health Authority, 3rd Floor, Tower-1, LIC Jeevan Bharati Building, Connaught Place, New Delhi-110001
ಇದನ್ನೂ ಓದಿ : ICC ವಿಳಂಬ ಧೋರಣೆಗೆ ಬೇಸತ್ತ ವೆಸ್ಟ್ ಇಂಡೀಸ್.. ಭಾರತದಲ್ಲಿ ಸಿಲುಕಿದ್ದ ಆಟಗಾರರಿಗೆ ಸ್ವಂತ ಖರ್ಚಿನಲ್ಲಿ ವಿಮಾನ ವ್ಯವಸ್ಥೆ!



















