ಮಂಗಳೂರು : ಮುಂದಿನ ತಿಂಗಳು ನಡೆಯುವ ಬಿಹಾರ ವಿಧಾಸಭೆ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಣ ಕಲೆಕ್ಷನ್ ಮಾಡುತ್ತಿದೆ ಎಂಬ ವಿರೋಧ ಪಕ್ಷದ ಬಿಜೆಪಿ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
“ನಾವು ಕರ್ನಾಟಕದಿಂದ ಯಾವುದೇ ರಾಜ್ಯದ ಚುನಾವಣೆಗೆ 5 ಪೈಸೆಯನ್ನೂ ನೀಡಿಲ್ಲ, ಬಿಹಾರಕ್ಕೂ ನೀಡುತ್ತಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.
ಬಿಜೆಪಿಯ ಆರೋಪಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಅವರು (ಬಿಜೆಪಿ) ಚುನಾವಣೆಗಾಗಿ ಹಣ ಕಲೆಕ್ಷನ್ ಮಾಡುತ್ತಿದ್ದರು. ಈಗ ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಬಿಹಾರ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಿಗಳಿಂದ ಹಣ ಸಂಗ್ರಹಿಸುತ್ತಿದೆ ಎಂದು ಬಿಜೆಪಿ ಸಂಸದರಾದ ಬಿ ವೈ ರಾಘವನೇದ್ರ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಆರೋಪಿಸಿದ್ದರು.