ಬೆಂಗಳೂರು: ಪತಿ- ಪತ್ನಿಯ ಮಧ್ಯೆ ಶುರುವಾದ ಹಣಕಾಸಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ (Bengaluru) ವೈಯಾಲಿಕಾವಲ್ ನಲ್ಲಿ (Vyalikaval) ಈ ಘಟನೆ ನಡೆದಿದೆ. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಶರತ್ ಮತ್ತು ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿ ಆಗಿರುವ ಚೇತನಾ ಕಳೆದ ಮೂರು ವರ್ಷಗಳಿಂದ ವಾಸಿಸುತ್ತಿದ್ದರು.
ಆದರೆ, ಇಬ್ಬರ ಮಧ್ಯೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಗಲಾಟೆಗಳು ನಡೆಯುತ್ತಿದ್ದವು. ಇತ್ತೀಚೆಗೆ ಕೂಡ ಇಬ್ಬರ ಮಧ್ಯೆ ಹಣಕ್ಕಾಗಿ ಜಗಳ ನಡೆದಿದೆ. ಈ ಸಂದರ್ಭದಲ್ಲಿ ಕೋಪದಲ್ಲಿದ್ದ ಪತಿ, ಪತ್ನಿ ಚೇತನಾಳನ್ನು ಶರತ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆನಂತರ ಅನಾರೋಗ್ಯದಿಂದ ಪತ್ನಿ ಪ್ರಜ್ಞೆ ತಪ್ಪಿದ್ದಾಳೆ ಎಂದು ಆಸ್ಪತ್ರೆಗೆ ಸೇರಿದ್ದಾನೆ. ಆ ವೇಳೆಗಾಗಲೇ ಪತ್ನಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ನಿಜಾಂಶ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.