ಚಿಕ್ಕಮಗಳೂರು: ರಾಜ್ಯಕ್ಕೆ ಮತ್ತೆ ಮಂಗನ ಕಾಯಿಲೆ (ಕೆಎಫ್ಡಿ) ಎಂಟ್ರಿ ಕೊಟ್ಟಿದೆ. ಮಾರಣಾಂತಿಕ ರೋಗ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.
ಜಿಲ್ಲೆಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆಎಫ್ಡಿ ಕಾಣಿಸಿಕೊಂಡಿತ್ತು. ಆ ನಂತರ ಈಗ ಜಿಲ್ಲೆಯಲ್ಲಿ ಒಟ್ಟು 7 ಪ್ರಕರಣಗಳು ಬೆಳಕಿಗೆ ಬಂದಿವೆ. ಅದೇ ಗ್ರಾಮದ ಮೂವರಲ್ಲಿ ಕೆಎಫ್ ಡಿ ಕಾಣಿಸಿಕೊಂಡಿದೆ. ಹೀಗಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್ಡಿ ವಾರ್ಡ್ ತೆರೆಯಲಾಗಿದೆ.
ಹಿಂದಿನ ವರ್ಷ ಜಿಲ್ಲೆಯಲ್ಲಿ 132 ಜನರಲ್ಲಿ ಕೆಎಫ್ ಡಿ ಕಾಣಿಸಿಕೊಂಡಿತ್ತು. ಅಲ್ಲದೇ, ನಾಲ್ವರು ಸಾವನ್ನಪ್ಪಿದ್ದರು. ಹೀಗಾಗಿ ಮತ್ತೆ ಕಾಡಂಚಿನ ಜನರಲ್ಲಿ ಭಯ ಶುರುವಾಗಿದೆ. ಈಗ ಮತ್ತೆ ಅರೋಗ್ಯ ಇಲಾಖೆ ಕೆಎಫ್ಡಿ ಅಲರ್ಟ್ ಘೋಷಣೆ ಮಾಡಿದೆ. ಅರಣ್ಯದಲ್ಲಿ ಮಂಗಗಳು ಸಾವನ್ನಪ್ಪಿರುವ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.
ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗಳಿಗೆ ತೆರಳಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.