ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಶ್ರೀ ಕ್ಷೇತ್ರದಲ್ಲಿ ಮಾಸಿಕ ಹುಂಡಿ ಎಣಿಕೆ ವೇಳೆ ದಾಖಲೆ ಪ್ರಮಾಣದ ನಗದು ಹಾಗೂ ಚಿನ್ನಾಭರಣ ಸಂಗ್ರಹವಾಗಿದೆ.
ಮಲೆ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿನ್ನೆ ಬೆಳಗ್ಗೆಯಿಂದ ತಡರಾತ್ರಿವರೆಗೆ ಹುಂಡಿ ಎಣಿಕೆ ಕಾರ್ಯ ನಡೆಯಿತು. ಕೇವಲ 28 ದಿನಗಳ ಅವಧಿಯಲ್ಲಿ ಒಟ್ಟು 3 ಕೋಟಿ 41 ಲಕ್ಷ 44 ಸಾವಿರ 208 ರೂಪಾಯಿ ನಗದು ಸಂಗ್ರಹವಾಗಿದ್ದು, ಜೊತೆಗೆ 71 ಗ್ರಾಂ ಚಿನ್ನ ಹಾಗೂ 2 ಕೆ.ಜಿ 50 ಗ್ರಾಂ ಬೆಳ್ಳಿ ಕೂಡ ಭಕ್ತರಿಂದ ಸಮರ್ಪಣೆಯಾಗಿದೆ.
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದರಿಂದ ಹುಂಡಿ ಸಂಗ್ರಹದಲ್ಲಿ ಭಾರೀ ಏರಿಕೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ಐದು ದಿನಗಳ ಕಾಲ ನಡೆದ ಶಿವರಾತ್ರಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ವಿವಿಧ ಸೇವೆಗಳು ಹಾಗೂ ಕಾಣಿಕೆಗಳಿಂದಲೂ ದೇವಾಲಯಕ್ಕೆ ಸುಮಾರು 3 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ಆದಾಯ ಬಂದಿರುವ ಮಾಹಿತಿ ಲಭ್ಯವಾಗಿದೆ. ರಾಜ್ಯದ ಅತೀ ಹೆಚ್ಚು ಆದಾಯ ಬರುವ ದೇವಾಲಯಗಳ ಪಟ್ಟಿಯಲ್ಲಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿ ದೇವಾಲಯವು ಎರಡನೇ ಸ್ಥಾನದಲ್ಲಿರುವುದು ವಿಶೇಷವಾಗಿದೆ.
ಇದನ್ನೂ ಓದಿ : ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್



















