ಬೆಂಗಳೂರು: ಗಣೇಶ ಚತುರ್ಥಿಯ ಮೊದಲ ದಿನವಾಗಿರುವ ಶನಿವಾರ ಬರೋಬ್ಬರಿ 2,17,000 ಸಾವಿರಕ್ಕೂ ಅಧಿಕ ಗಣೇಶ ಮೂರ್ತಿಗಳನ್ನು ಸಿಲಿಕಾನ್ ಸಿಟಿಯಲ್ಲಿ ವಿಸರ್ಜಿಸಲಾಗಿದೆ.
ಗಣೇಶ ಮೂರ್ತಿ ವಿಸರ್ಜಿಸುವ ಹಿನ್ನೆಲೆಯಲ್ಲಿ ಯಡಿಯೂರು ಕೆರೆ ವಿಸರ್ಜನಾ ಕೊಳಕ್ಕೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಯಡಿಯೂರು ಕರೆಯ ವಿಸರ್ಜನಾ ಕೊಳದಲ್ಲಿ 2023ರಲ್ಲಿ 11 ದಿನಗಳ ಅವಧಿಯಲ್ಲಿ ಅಂದಾಜು 1,75,000 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿತ್ತು. ಅಲ್ಲದೇ, ಇಲ್ಲಿ ಸೆ. 17ರ ವರೆಗೆ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಲಾಗಿದೆ.
ಮೊದಲ 3 ಮೂರು ದಿನಗಳ ಕಾಲ ಹೆಚ್ಚು ಗಣೇಶ ಮೂರ್ತಿಗಳು ವಿಸರ್ಜನೆಯಾಗಲಿದ್ದು, ವಿಸರ್ಜನಾ ಕೊಳ ಬಹುತೇಕ ಭರ್ತಿಯಾಗಲಿದೆ. 11 ರಿಂದ 17ನೇ ತಾರೀಖಿನವರೆಗೆ ಮಾತ್ರ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲು ಅಗತ್ಯ ಸೌಲಭ್ಯಗಳ ವ್ಯವಸ್ಥೆಗೆ ಪಾಲಿಕೆ ಕ್ರಮ ವಹಿಸಿದೆ.
ಸೆ. 10ರಂದು ಗಣೇಶ ವಿಸರ್ಜನೆಗೆ ಅವಕಾಶ ನೀಡಿಲ್ಲ. ಅಲ್ಲದೇ, ಸೆ. 18ರ ನಂತರವೂ ಅವಕಾಶ ಇಲ್ಲ. ಯಡಿಯೂರು ಕೆರೆ ವಿಸರ್ಜನಾ ಕೊಳದಲ್ಲಿ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ವಿರ್ಜನೆ ಮಾಡಲು ಅವಕಾಶ ನೀಡಲಾಗಿದೆ.