ಚಾಮರಾಜನಗರ: 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.
ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ ಈ ಮನಕರಗುವ ದೃಶ್ಯ ಕಂಡು ಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ವಿಷಪ್ರಾಶನದಿಂದಾಗಿ ಕೋತಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳನ್ನು ಬೇರೆಡೆ ವಿಷ ಹಾಕಿ ಕೊಂದು ಇಲ್ಲಿ ತಂದು ಹಾಕಿರುವ ಶಂಕೆಯನ್ನು ಸ್ಥಳೀಯರು ತೋರ್ಪಡಿಸಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.