ಬೆಳಗಾವಿ: ಕಲುಷಿತ ನೀರು (Contaminated water) ಸೇವಿಸಿ 30ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಈ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ (Nippani) ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಬೋರ್ ವೆಲ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಈ ಪೈಪ್ ಒಡೆದ ಪರಿಣಾಮ ಕೊಳಚೆ ನೀರು ಮಿಶ್ರಣವಾಗಿದೆ. ಇದನ್ನು ಕುಡಿದ ಜನರು ಅಸ್ವಸ್ಥರಾಗಿದ್ದಾರೆ.
ಪರಿಣಾಮ 30ಕ್ಕೂ ಅಧಿಕ ಜನರು ವಾಂತಿ, ಭೇದಿಯಿಂದ ಬಳಲಿದ್ದಾರೆ. ಈ ಪೈಕಿ 10ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲೇ ಚಿಕಿತ್ಸೆ ನೀಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.