ಬೆಂಗಳೂರಿನ ಉದ್ಯಾನವನಗಳಲ್ಲಿ ಸೊಳ್ಳೆಗಳ ಹಾವಳಿ ತೀವ್ರಗೊಂಡಿದ್ದು, ಸಾರ್ವಜನಿಕರು ಹೈರಾಣಾಗಿದ್ದಾರೆ. ಪಾರ್ಕ್ಗಳಿಗೆ ಹೋದರೆ ಸಾಕು ಸೊಳ್ಳೆಗಳ ಕಾಟ ಶುರುವಾಗುತ್ತಿದ್ದು, ವಾಯುವಿಹಾರ, ವಿಶ್ರಾಂತಿ ಹಾಗೂ ವ್ಯಾಯಾಮಕ್ಕೆ ಬಂದವರಿಗೆ ತೀವ್ರ ಕಿರಿಕಿರಿ ಉಂಟಾಗುತ್ತಿದೆ.
ಸೊಳ್ಳೆ ಕಡಿತದಿಂದ ನಾನಾ ಆರೋಗ್ಯ ಸಮಸ್ಯೆಗಳು ಎದುರಾಗುವ ಭೀತಿ ಎದುರಾಗಿದೆ. ಪಾರ್ಕ್ಗಳಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜಿಬಿಎ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಾಗರಿಕರು ಆಕ್ರೋಶ ಹೊರಹಾಕಿದ್ದಾರೆ.


















