ಬೆಂಗಳೂರು ಗ್ರಾಮಾಂತರ: ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ತಾಯಿ ಮಗು ಆಸ್ಪತ್ರೆಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ಸಿಂಗೇನಹಳ್ಳಿ ನಿವಾಸಿ ಸುಷ್ಮಿತಾ(23) ಸಾವನ್ನಪ್ಪಿರುವ ಮಹಿಳೆ. ಆ. 5ರಂದು ಆಸ್ಪತ್ರೆಗೆ ಚೆಕಪ್ ಮಾಡಿಸಿಕೊಂಡು ಹೋಗಲು ಬಂದಾಗ, ವೈದ್ಯರು ನಾಳೆ ಹೆರಿಗೆ ಮಾಡುತ್ತೇವೆ ಎಂದು ಹೇಳಿ ಕಳುಹಿಸಿದ್ದರು. ಇಂದು ಆಸ್ಪತ್ರೆಗೆ ಬಂದ ಕೂಡಲೇ ಸುಷ್ಮೀತಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗೆ ಬರುವ ಮುನ್ನವೇ ತಾಯಿ ಸುಷ್ಮೀತಾ ಸಾವನಪ್ಪಿರುವುದಾಗಿ ವೈದ್ಯರು ಹೇಳಿದ್ದಾರೆ. ಇದರಿಂದಾಗಿ ಆಕ್ರೋಶಗೊಂಡ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಮುಂದೆ ಸಂಬಂಧಿಕರು ಪ್ರತಿಭಟನೆ ನಡೆಸಿದ್ದು, ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.