ವಿಜಯಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಕ್ಕಳು ದಾರುಣ ಸಾವು ಕಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಹತ್ತಿರ ಈ ನಡೆದಿದೆ. ಗೀತಾ ಬಡಗಿ(28), ಮಕ್ಕಳಾದ ಶ್ರವಣ್(6), ಶರಣ್(4) ಸಾವನ್ನಪ್ಪಿರುವ ದುರ್ದೈವಿಗಳು. ಗೀತಾ ಅವರ ತಂದೆಯ ಹೊಲದಲ್ಲಿದ್ದ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಯಾಳವಾರ ಗ್ರಾಮದ ನಿವಾಸಿ ಶ್ರೀಶೈಲ ಜೊತೆಗೆ ಮದುವೆಯಾಗಿದ್ದ ಗೀತಾ, ಪತಿಯೊಂದಿಗೆ ಜಗಳವಾಡಿ ತವರು ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಕುರಿತು ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.