ಮೈಸೂರು: ಇಬ್ಬರು ಮಕ್ಕಳ ಕತ್ತು ಕೊಯ್ದು ಕೊಲೆ ಮಾಡಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆಯೊಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಮಹಿಳೆ ತನ್ನ 10 ದಿನದ ಹೆಣ್ಣು ಮಗು ಹಾಗೂ 5 ವರ್ಷದ ಹೆಣ್ಣು ಮಗುವಿನ ಕತ್ತು ಕೊಯ್ದು ಕೊಲೆ ಮಾಡಿದ್ದಾಳೆ. ಬಳಿಕ ತಾನು ಕೂಡ ಅದೇ ಚಾಕುವಿನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಬೆಟ್ಟದಪುರ ಪೊಲೀಸ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಆಡಳಿತ ಮಂಡಳಿ!



















