ಕೊಪ್ಪಳ : ಇಬ್ಬರು ಪುತ್ರಿಯರ ಜೊತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದಲ್ಲಿ ನಡೆದಿದೆ.
ಹುಲಿಗೆವ್ವ(9), ವಿಜಯಮ್ಮ(8) ಜೊತೆ ತಾಯಿ ಬಾಳವ್ವ(35) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆ ಮಾಡಿಕೊಳ್ಳಲು ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ. ಘಟನಾ ಸಂಬಂಧ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಗ್ಯಾಸ್ ಸಿಲಿಂಡರ್ ಕದಿಯುತ್ತಿದ್ದ ಐನಾತಿ ಕಳ್ಳರು ಅರೆಸ್ಟ್!
ರಾಮನಗರ: ಮನೆಮುಂದೆ ನಿಲ್ಲಿಸಿದ್ದ ಗ್ಯಾಸ್ ಸರಬರಾಜು ವಾಹನದಿಂದ 8 ಸಿಲಿಂಡರ್ ಕದ್ದು ಎಸ್ಕೇಪ್ ಆಗಿದ್ದ ಇಬ್ಬರು ಖದೀಮರನ್ನು ಬಿಡದಿ ಪೋಲಿಸರು ಭರ್ಜರಿ ಕಾರ್ಯಚರಣೆ ಮಾಡಿ ಬಂಧಿಸಿದ್ದಾರೆ. ಬಂಧಿತರು ಮಹೇಶ್ ನಾಯಕ್ (19) ಮತ್ತು ಗೋವಿಂದರಾಜು (20) ಎನ್ನಲಾಗಿದ್ದು, ರಾಮನಗರ ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಮನೆಮುಂದೆ ನಿಂತಿದ್ದ ಗ್ಯಾಸ್ ಸರಬರಾಜು ವಾಹನದಲ್ಲಿ ಕಳ್ಳತನ ಮಾಡಿದ್ದರು. ಈ ಘಟನೆ ಸಂಬಂಧಿ ಪ್ರಕರಣ ಬಿಡದಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಪೋಲಿಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದು, 8 ಗ್ಯಾಸ್ ಸಿಲಿಂಡರ್‌ಗಳು ಮತ್ತು ಕೃತ್ಯಕ್ಕೆ ಬಳಸಿದ್ದ 1 ಬೈಕ್ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.



















