ಆನೇಕಲ್ : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು 7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ರಾಯಸಂದ್ರದಲ್ಲಿ ನಡೆದಿದೆ.
ಸಾನಿಕ ಗೌಡ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಚಿಕ್ಕಮಗಳೂರು ಮೂಲದ ಶರಣ್ ಗೌಡ ಎಂಬುವವರನ್ನು ಸಾನಿಕ ಗೌಡ ಕಳೆದ ಒಂದು ವರ್ಷ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಬಾಣಂತನಕ್ಕಾಗಿ ತವರು ಮನೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ.
ಪತಿ ಶರಣ್ ಗೌಡ ಅಕ್ರಮ ಸಂಬಂಧ ಹೊಂದಿದ್ದ ಎಂಬ ಆರೋಪ ಕೇಳಿಬಂದಿದ್ದು, ಪ್ರಿಯತಮೆಯೊಂದಿಗೆ ಮಾತನಾಡಿರುವ ವಿಡಿಯೋವನ್ನು ಪತ್ನಿಗೆ ಕಳುಹಿಸಿದ್ದ ಎನ್ನಲಾಗಿದೆ. ಇದರಿಂದ ತೀವ್ರವಾಗಿ ಬೇಸತ್ತಿದ್ದ ಸಾನಿಕ ಗೌಡ, ಪತಿ ಶರಣ್‌ಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ತವರು ಮನೆಯಲ್ಲೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪರಪ್ಪನ ಅಗ್ರಹಾರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪರಪ್ಪನ ಅಗ್ರಹಾರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!


















