ಬೆಂಗಳೂರು | ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಜತೆ ನಡೆದ ಜಗಳದಿಂದ ಮನನೊಂದು ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಬ್ಬಿಗೆರೆ ಪ್ರದೇಶದಲ್ಲಿ ನಡೆದಿದೆ. ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಷ್ಮಾ (35) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಷ್ಮಾ ಅವರು 5 ವರ್ಷಗಳ ಹಿಂದೆ ಪುನೀತ್ ಕುಮಾರ್ ಎಂಬುವರನ್ನು ವಿವಾಹವಾಗಿದ್ದರು. ಮನೆಯಲ್ಲಿ ಅಡುಗೆ ಮಾಡುವ ವಿಚಾರದಲ್ಲಿ ಅತ್ತೆ ಕಲ್ಪನಾ ಮತ್ತು ಸೊಸೆ ಸುಷ್ಮಾ ನಡುವೆ ಪದೇಪದೆ ಜಗಳವಾಗುತ್ತಿತ್ತು. ಒಂದೇ ಒಲೆಯಲ್ಲಿ ಪ್ರತ್ಯೇಕವಾಗಿ ಅಡುಗೆ ಮಾಡುವ ಬಗ್ಗೆ ಭಿನ್ನಾಭಿಪ್ರಾಯ ಉಂಟಾಗಿತ್ತು, ಅಡುಗೆ ವೇಳೆ ಸೊಸೆಗೆ ಸರಿಯಾದ ಜಾಗ ಕೊಡದೇ ಇರುವುದು, ತುಪ್ಪ/ಇತರ ಸಾಮಗ್ರಿಗಳ ವಿಚಾರದಲ್ಲಿ ಜಗಳ ತೀವ್ರಗೊಂಡಿತ್ತು ಎಂದು ತಿಳಿದುಬಂದಿದೆ.
ಮನನೊಂದ ಸುಷ್ಮಾ ಅವರು ಈ ಘಟನೆಯ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಸುಷ್ಮಾ ಅವರ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಸುಷ್ಮಾ ಪೋಷಕರು ದೂರು ನೀಡಿದ್ದಾರೆ.
ದೂರಿನ ಮೇರೆಗೆ ಪೊಲೀಸರು ಪತಿ ಪುನೀತ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಅತ್ತೆ ಕಲ್ಪನಾ ಅವರನ್ನು ವಶಕ್ಕೆ ಪಡೆಯಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಬಿಡುಗಡೆಗೆ ವಿಳಂಬ : ಚಿತ್ರದುರ್ಗದಲ್ಲಿ ರೈತರ ಉಪವಾಸ ಸತ್ಯಾಗ್ರಹ



















