ಚಿಕ್ಕಬಳ್ಳಾಪುರ: ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಚಿಕ್ಕಬಳ್ಳಾಪುರ (Chikkaballapura) ತಾಲ್ಲೂಕಿನ ರಂಗಸ್ಥಳ ಗ್ರಾಮದ ರಂಗಧಾಮ ಕೆರೆಯಲ್ಲಿ ಈ ಘಟನೆ ನಡೆದಿದೆ. ಬಾಧಗಾನಹಳ್ಳಿ ಗ್ರಾಮದ ಲಾವಣ್ಯ (30) ನಿಹಾರಿಕಾ (10) ನೇಹಾ (6) ವರ್ಷ ಸಾವನ್ನಪ್ಪಿರುವ ದುರ್ದೈವಿಗಳು.
ಪತಿ ಹಾಗೂ ಪತ್ನಿಯ ಮಧ್ಯೆ ನಡೆದ ಗಲಾಟೆಯೇ ಈ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಪತಿಗೆ ಚೆನ್ನಾಗಿ ದುಡಿ ಎಂದು ಪತ್ನಿ ಬುದ್ಧಿವಾದ ಹೇಳಿದ್ದಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಇದೇ ವಿಚಾರವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೂರು ಮೃತದೇಹಗಳನ್ನ ಪೊಲೀಸರು ಹೊರ ತೆಗೆದಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.