ಚಾಮರಾಜನಗರ: ಮಹಿಳೆಯೊಬ್ಬರು ತಮ್ಮ ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ(Chamarajanagar) ಹನೂರು(Hanur) ತಾಲೂಕಿನ ಮಹದೇಶ್ವರ ಬೆಟ್ಟದ ಹತ್ತಿರದ ಕಾಡುಹೊಲ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಶೀಲ (30), ಆಕೆಯ ಮಕ್ಕಳಾದ ಚಂದ್ರು (8), ದಿವ್ಯ (11) ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ(Family Feud)ದಿಂದಾಗಿ ಮಹಿಳೆ ಈ ರೀತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹೊಲದ ಮಾಲೀಕ ನೀರು ತರಲು ಬಾವಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


















