ಕಲಬುರಗಿ: ಬಾಣಂತಿ ಸಾವಿನ (Mternal Death) ಪ್ರಕರಣವೊಂದು ವರದಿಯಾಗಿದ್ದು, ಸಂಬಂಧಿಕರು ಉದ್ರಿಕ್ತಗೊಂಡು ಆಸ್ಪತ್ರೆ ಧ್ವಂಸ ಮಾಡಿದ್ದಾರೆ ಎನ್ನಲಾಗಿದೆ.
ಕಲಬುರಗಿಯ (Kalaburagi) ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ನಗರದ ಎಂಎಸ್‌ಕೆ ಮಿಲ್ ಬಡಾವಣೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಬಾಣಂತಿ ತಾಯಿ ಹಾಗೂ ನವಜಾತ ಶಿಶು ಸಾವನ್ನಪ್ಪಿದ್ದಾರೆ. ಸಭಾ ಪರ್ವಿನ್ ಎಂಬ ಬಾಣಂತಿ ಸಾವನ್ನಪ್ಪಿದ್ದು, ನವಜಾತ ಶಿಶು ಸಾವನ್ನಪ್ಪಿದೆ. ಹೀಗಾಗಿ ಸಂಬಂಧಿಕರು ಉದ್ರಿಕ್ತಕೊಂಡು ಆಸ್ಪತ್ರೆ ಧ್ವಂಸ ಮಾಡಿದ್ದಾರೆ.
ಭಾನುವಾರ ಸಂಜೆ ಸಭಾ ಪರ್ವಿನ್ ರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಹೆರಿಗೆಗೂ ಮುನ್ನ ಗರ್ಭದಲ್ಲಿಯೇ ಮಗು ಸಾವನ್ನಪ್ಪುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದಾರೆ. ಆದರೆ, ತಾಯಿ ಲೋ ಬಿಪಿಯಿಂದ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ, ಆಸ್ಪತ್ರೆ ಗಾಜು ಪುಡಿ ಪುಡಿ ಮಾಡಿ ಪೀಠೋಪಕರಣ ಧ್ವಂಸಗೊಳಿಸಿದ್ದಾರೆ. ಆರ್.ಜಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.