ಪುಷ್ಪ 2 ಚಿತ್ರ ಪ್ರದರ್ಶನ ಕಾಣುತ್ತಿದ್ದ ಸಂಧ್ಯಾ ಚಿತ್ರಮಂದಿರ ಕಾಲ್ತುಳಿತ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅರೆಸ್ಟ್ ಆಗಿದ್ದರು. ಅಷ್ಟೇ ಅಲ್ಲ, ಸಂಧ್ಯಾ ಚಿತ್ರಮಂದಿರದ ಮಾಲೀಕ, ಮ್ಯಾನೇಜರ್, ಅಲ್ಲು ಅರ್ಜುನ್ ರ ಬಾಡಿಗಾರ್ಡ್ ಹಾಗೂ ‘ಪುಷ್ಪ 2’ ಸಿನಿಮಾದ ನಿರ್ಮಾಪಕರ ಮೇಲೆಯೂ ಈ ಕುರಿತು ದೂರು ದಾಖಲಾಗಿತ್ತು.
ಪ್ರಕರಣದ ವಿರುದ್ಧ ಅಲ್ಲು ಅರ್ಜುನ್ ಹಾಗೂ ಇನ್ನೂ ಕೆಲವರು ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸುತ್ತಿರುವ ತೆಲಂಗಾಣ ಹೈಕೋರ್ಟ್ ಸದ್ಯ ‘ಪುಷ್ಪ 2’ ಸಿನಿಮಾದ ನಿರ್ಮಾಪಕರಿಗೆ ರಿಲೀಫ್ ನೀಡಿದೆ. ಸಿನಿಮಾದ ನಿರ್ಮಾಪಕರನ್ನು ಬಂಧಿಸದಂತೆ ಸೂಚಿಸಿದೆ.
ಕಾನೂನು ಸುವ್ಯವಸ್ಥೆಗೆ ನಿರ್ಮಾಪಕರು ಹೇಗೆ ಜವಾಬ್ದಾರರಾಗುತ್ತಾರೆ ಎಂದು ಪ್ರಶ್ನೆ ಮಾಡಿರುವ ಹೈಕೋರ್ಟ್, ನಿರ್ಮಾಪಕರನ್ನು ಬಂಧಿಸದಂತೆ ಪೊಲೀಸರಿಗೆ ಸೂಚಿಸಿದೆ. ಅಲ್ಲದೆ, ಎರಡು ವಾರಗಳ ಕಾಲಾವಕಾಶ ನೀಡಿ, ಪ್ರಕರಣದಲ್ಲಿ ಆರೋಪಿಗಳನ್ನು ಸರಿಯಾಗಿ ಗುರುತಿಸಿ ಹೊಸದಾಗಿ ಪಿಟಿಷನ್ ಸಲ್ಲಿಸುವಂತೆ ಹೇಳಿದೆ.