ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಸ್‌ಎಸ್‌ಎಲ್‌ಸಿ ಟಾಪರ್ಸ್ ಆಗಿರುವ ಜಿಲ್ಲೆಯ 9 ವಿದ್ಯಾರ್ಥಿಗಳಿಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಐದು ದಿನಗಳ ದೆಹಲಿ ಶೈಕ್ಷಣಿಕ ಪ್ರವಾಸ ಆಯೋಜಿಸಿದ್ದಾರೆ. ಲೋಹದ ಹಕ್ಕಿಯಲ್ಲಿ ಪ್ರಯಾಣಿಸಬೇಕೆಂಬ ವಿದ್ಯಾರ್ಥಿಗಳ ಕನಸು ನನಸು ಮಾಡುತ್ತಿರುವ ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ತಮ್ಮ ಗೃಹ ಕಚೇರಿಯಲ್ಲಿ ಪ್ರವಾಸಕ್ಕೆ ತೆರಳಲಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿ, ಅವರ ಅನಿಸಿಕೆಗಳನ್ನು ಆಲಿಸಿದ ಸಂಸದರು ಬಳಿಕ, ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿಗಳ ತಂಡವು ಸೋಮವಾರ ಸಂಜೆ 5-30 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ವಿಮಾನದಲ್ಲಿ ಪ್ರಯಾಣ ಆರಂಭಿಸಲಿದ್ದಾರೆ. ದೆಹಲಿಯಲ್ಲಿ ಇಂಡಿಯಾ ಗೇಟ್, ಕಮಲ ಮಂದಿರ, ಕುತುಬ್ ಮಿನಾರ್, ಕೆಂಪುಕೋಟೆ, ಕರ್ತವ್ಯ ಪಥ ಮತ್ತು ಸ್ವಾಮಿನಾರಾಯಣ ಮಂದಿರ ಮುಂತಾದ ರಾಷ್ಟ್ರದ ಪ್ರಮುಖ ಸ್ಮಾರಕಗಳು ಹಾಗೂ ಸಾಂಸ್ಕೃತಿಕ ಸ್ಥಳಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಲಿದ್ದಾರೆ. ಇವರ ಜೊತೆ ಒಬ್ಬ ಪುರುಷ ಮತ್ತು ಒಬ್ಬ ಮಹಿಳಾ ಶಿಕ್ಷಕರೂ ಕೂಡ ತೆರಳಲಿದ್ದಾರೆ. ವಿದ್ಯಾರ್ಥಿಗಳ ದೆಹಲಿ ಪ್ರವಾಸದ ವೆಚ್ಚ, ವಸತಿ ಊಟ ಸೇರಿ ಎಲ್ಲದರ ಖರ್ಚನ್ನು ಸಂಸದರೇ ಭರಿಸಲಿದ್ದಾರೆ.
ಇದನ್ನೂ ಓದಿ: ಟೈಟನ್ಸ್ ವಿರುದ್ಧ ಬುಲ್ಸ್‌ಗೆ ವೀರೋಚಿತ ಸೋಲು | ಧಿಧಿ- ಫಲ ನೀಡದ ಅಲಿರೇಜಾ ಮಿರ್ಜಾಯಿನ್ ಹೋರಾಟ
















