ಬೆಂಗಳೂರು: ನೀವು ಇತ್ತೀಚೆಗಷ್ಟೇ ಪದವಿ ಅಥವಾ ಡಿಪ್ಲೋಮಾ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ವೃತ್ತಿ ತರಬೇತಿ ಪಡೆಯಬೇಕು ಎಂಬ ಬಯಕೆ ಇದೆಯೇ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (MRPL Recruitment 2026) ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್
ಹುದ್ದೆಗಳ ಹೆಸರು: ಗ್ರಾಜ್ಯುಯೇಟ್ ಅಪ್ರೆಂಟಿಸ್ ಟ್ರೈನಿ ಇತ್ಯಾದಿ
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 13
ಗ್ರಾಜ್ಯುಯೇಟ್ ಅಪ್ರೆಂಟಿಸ್ ಟ್ರೈನಿ ಹಾಗೂ ಟೆಕ್ನಿಶಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಜಿನಿಯರಿಂಗ್ ಪದವಿ ಅಥವಾ ಡಿಪ್ಲೋಮಾ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ mrpl.co.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು.
ಇದನ್ನೂ ಓದಿ:ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!


















